ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಟ್ಯಾಲೆಂಟ್ ಹಂಟ್

Update: 2025-01-06 15:32 GMT

ಬ್ರಹ್ಮಾವರ, ಜ.6: ಬಾರಕೂರು ಶ್ರೀರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಮರ್ಸ್ ಫೋರಮ್, ಆಂತರಿಕ ಗುಣಮಟ್ಟದ ಭರವಸೆ ಕೋಶ, ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಜ.3ರಂದು ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕಾರ್ಕಳದ ಎಂ.ಪಿ.ಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಜಯಲಕ್ಷ್ಮೀ ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಸಲ್ವಾಡಿ ವಹಿಸಿದ್ದರು.

ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಶೋಭಾ ಆರ್., ಸಹಾಯಕ ಪ್ರಾಧ್ಯಾಪಕ ಅನಿಲ್ ಕುಮಾರ್ ಕೆ.ವೈ., ಸುಮ ಟಿ.ಕೆ., ಡಾ.ಹೇಮಾ ಎಸ್.ಕೊಡದ್, ಡಾ. ಶ್ರೀದೇವಿ, ಡಾ.ಗಣೇಶ್ ಪ್ರಸಾದ್ ಮತ್ತು ಗ್ರಂಥಪಾಲಕ ಹರೀಶ್ ಸಿ.ಕೆ. ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧಾಪಕ ರಾಧಾಕೃಷ್ಣ ನಾಯಕ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸಂಜಲಿ ಬಿ. ಸ್ವಾಗತಿಸಿದರು. ಜಿ.ರಂಜಿತಾ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 12 ವಿವಿಧ ಕಾಲೇಜಿನ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಣಕು ಸಂದರ್ಶನ ಮತ್ತು ತುಣುಕು ವಿಡಿಯೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ನಾತಕೋತ್ತರ ಬೆಸ್ಟ್ ಟ್ಯಾಲೆಂಟ್ ಅವಾರ್ಡ್‌ನ್ನು ಕಾರ್ಕಳದ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಶರಣ್ಯ ನಾಯಕ್ ಪಡೆದುಕೊಂಡರು. ಅದೇ ಕಾಲೇಜಿನ ಶ್ರೇಯ ಶೆಟ್ಟಿ ಮೋಸ್ಟ ಪ್ರಾಮಿಸಿಂಗ್ ಟ್ಯಾಲೆಂಟ್ ಅವಾರ್ಡ್‌ನ್ನು ಮತ್ತು ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅನಂತ ಡಿ. ಡೈನಾಮಿಕ್ ಪರ್ಫಾರ್ಮರ್ ಅವಾರ್ಡನ್ನು ಪಡೆದು ಕೊಂಡರು. ಬೆಸ್ಟ್ ಶಾರ್ಟ್ ವಿಡಿಯೋ 2025 ಪ್ರಶಸ್ತಿಯನ್ನು ಎಂ.ಜಿ.ಎಂ ಕಾಲೇಜಿನ ಯತಿರಾಜ್ ಮತ್ತು ತಂಡದವರು ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News