ಉಡುಪಿ: ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮಕ್ಕೆ ದೂರು

Update: 2025-01-07 13:40 GMT

ಉಡುಪಿ, ಜ.7: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡು ತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಉಡುಪಿ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.

ಇತ್ತೀಚೆಗೆ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಉಡುಪಿ ಶಾಸಕರು ಮಸೀದಿ, ದೇವಸ್ಥಾನ ಹಾಗೂ ಚರ್ಚ್‌ಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದು ಕೊಂಡಾಗ ನಾನು ಧಾರ್ಮಿಕ ಸಂಸ್ಥೆಗಳ ಬಗ್ಗೆ ಕ್ರಮಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರೆಯಬೇಕು ಎಂದು ಹೇಳಿದ್ದೆ. ಅದರ ಹೊರತು ಯಾವುದೇ ಧರ್ಮಕ್ಕೆ ಅಥವಾ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿರುವುದಿಲ್ಲ.

ಆದರೆ ಒಬ್ಬ ವ್ಯಕ್ತಿ ನಾನು ಹಿಂದು ಧರ್ಮಕ್ಕೆ ಅವಹೇಳನ ಮಾಡಿರುವುದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದಾನೆ. ಈ ಮೂಲಕ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಪ್ರಯತ್ನ ಮಾಡುತ್ತಿದ್ದಾನೆ. ಇವರ ವಿರುದ್ಧ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News