ಕುವೆಂಪು ನಿಸರ್ಗ, ವೈಚಾರಿಕತೆ, ಮಾನವ ಘನತೆಯಿಂದ ಪ್ರಭಾವಿತ: ಡಾ.ರೇಖಾ ಬನ್ನಾಡಿ

Update: 2025-01-07 14:35 GMT

ಉಡುಪಿ: ಕುವೆಂಪು ತಮ್ಮ ಕಾಲದ ಸಾಂಸ್ಕೃತಿಕ ತುರ್ತನ್ನು ಅರಿತು ಕೊಂಡು ಅದನ್ನು ತನ್ನ ಸಾಹಿತ್ಯದಲ್ಲಿ ಅಳವಡಿಸಿಕೊಂಡಿದ್ದರು ಎಂದು ಕುಂದಾಪುರದ ಪ್ರಾಧ್ಯಾಪಕಿ ಹಾಗೂ ಲೇಖಕಿ ಡಾ.ರೇಖಾ ಬನ್ನಾಡಿ ಹೇಳಿದ್ದಾರೆ.

ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗವು, ಐಕ್ಯೂಎಸಿಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ರಸಋಷಿ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡುತಿದ್ದರು.

ಕುವೆಂಪು ಅವರನ್ನು ಬಹುವಾಗಿ ಪ್ರಭಾವಿಸಿದ್ದು ನಿಸರ್ಗ, ವೈಚಾರಿಕತೆ ಮತ್ತು ಮಾನವ ಘನತೆ ಎಂದ ಡಾ.ಬನ್ನಾಡಿ, ಅವರು ತಮ್ಮ ಜೀವನದುದ್ದಕ್ಕೂ ಹೇಳಿಕೊಂಡು ಬಂದ ಸಾಮಾಜಿಕ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅನುಷ್ಠಾನಗೊಳಿಸಿದ ನಡವಳಿಕೆಯ ಸಂಹಿತೆಯನ್ನು ಅರ್ಥ ಮಾಡಿಕೊಳ್ಳ ಬೇಕಾದರೆ ಅದು ಮೊದಲು ನಮ್ಮ ಯುವ ತಲೆಮಾರಿಗೆ ತಲುಪಬೇಕಾಗಿದೆ ಎಂದು ಡಾ. ರೇಖಾ ಬನ್ನಾಡಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ ಕುವೆಂಪು ಅವರ ಆದರ್ಶವನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಕನ್ನಡ ವಿಭಾಗದ ಉಪನ್ಯಾಸಕರಾದ ಶರಿತಾ, ಸಂಧ್ಯಾರಾಣಿ, ಭಾರತಿ, ಅರ್ಚನಾ ಉಪಸ್ಥಿತರಿದ್ದರು.

ಗ್ರಂಥಪಾಲರಾದ ಕೃಷ್ಣ, ಕುವೆಂಪು ಗೀತಗಾಯನ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಶಾಲಿನಿ ಯು.ಬಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News