ಗಂಗೊಳ್ಳಿ: ಮೀನುಗಾರನ ಮೃತದೇಹ ಪತ್ತೆ
Update: 2025-01-07 15:15 GMT
ಗಂಗೊಳ್ಳಿ, ಜ.7: ಸಮುದ್ರದಲ್ಲಿ ಮೀನುಗಾರಿಕೆ ಸಂದರ್ಭ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ ರೊಬ್ಬರ ಜ.7ರಂದು ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಕಿರಿಮಂಜೇಶ್ವರ ಗ್ರಾಮದ ಮಾಚ(49) ಎಂದು ಗುರುತಿಸ ಲಾಗಿದೆ. ಇವರು ಜ.6ರಂದು ಬೆಳಗ್ಗೆ ಗಂಗೊಳ್ಳಿ ಬಂದರ್‌ನಿಂದ 12 ನ್ಯಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.