ಶರಣಾಗತಿ ಪ್ರಹಸನ ಅನುಮಾನಾಸ್ಪದ: ಶಾಸಕ ಸುನೀಲ್ ಕುಮಾರ್ ಟೀಕೆ

Update: 2025-01-08 14:57 GMT

ಉಡುಪಿ: ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತದೆ. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡಲಾಗುತ್ತಿದೆ. ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಕುಗ್ಗಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News