ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ

Update: 2025-01-11 14:48 GMT

ಉಡುಪಿ: ಅರ್ಹರಿಗೆ ಯಕ್ಷಗಾನ ಅಕಾಡೆಮಿಯ ಗೌರವಗಳು ಸಲ್ಲಬೇಕು. ಅದರಲ್ಲೂ ಯಕ್ಷಗಾನಕ್ಕಾಗಿ ತಮ್ಮನ್ನೇ ಮುಡಿಪಾ ಗಿಟ್ಟು, ಯಕ್ಷಗಾನದ ಏಳ್ಗೆಗಾಗಿ ಹಗಲಿರುಳು ಸೇವೆ ಸಲ್ಲಿಸಿದ ಹಿರಿಯ ಕಲಾವಿದರನ್ನು ಗುರುತಿಸಿ, ಸನ್ಮಾನಿಸಬೇಕು. ಈ ಮೂಲಕ ಯಕ್ಷಗಾನ ಕಲೆಯ ಉಳಿವಿಗೆ ಕಾರಣರಾದ ಈ ಮಹಾನ್ ಚೇತನಗಳಿಗೆ ಗೌರವ ಸಲ್ಲಬೇಕು ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಯಶಸ್ವೀ ಕಲಾವೃಂದ ಕೊಮೆ ವತಿಯಿಂದ ಶನಿವಾರ ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಆಯೋಜಿಸಲಾದ ’ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಹಿರಿಯ ಭಾಗವತ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಅಭಿನಂದಿಸಿ ಅವರು ಮಾತನಾಡುತಿದ್ದರು.

ತರಗತಿಯನ್ನು ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಉದ್ಘಾಟಿಸಿದರು. ಕಲಾವಿದ ಕೋಟ ಸುದರ್ಶನ ಉರಾಳ, ಶ್ವೇತಯಾನದ ಕಾರ್ಯಾಧ್ಯಕ್ಷ ಗೋಪಾಲ ಪೂಜಾರಿ ಕೊಮೆ, ಪವನ್ ಆಚಾರ್, ಕಾರ್ಯ ದರ್ಶಿ ವೆಂಕಟೇಶ ವೈದ್ಯ, ಮೋಹನಚಂದ್ರ ಪಂಜಿಗಾರು ಉಪಸ್ಥಿತರಿದ್ದರು.

ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುರು ಲಂಬೋದರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪೂಜಾ ಆಚಾರ್, ಪಂಚಮಿ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News