ಕುಂದಾಪುರ: ಕಾರು - ಟೆಂಪೋ ಢಿಕ್ಕಿ; ವಾಹನ ಚಾಲಕರಿಗೆ ಗಂಭೀರ ಗಾಯ
Update: 2025-01-12 17:47 GMT
ಕುಂದಾಪುರ: ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಘಟನೆಯ ವಿವರ: ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದು ಕುಂದಾಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ಐಸ್ ಕ್ರೀಮ್ ಸಾಗಾಟದ ಟೆಂಪೋಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದ್ದು ಇಬ್ಬರು ಚಾಲಕರು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ.