ಪ್ರೌಢಶಾಲಾ ಶಿಕ್ಷಕರಿಗೆ ಆಪ್ತ ಸಮಾಲೋಚನೆ ಕುರಿತ ಕಾರ್ಯಾಗಾರ
ಉಡುಪಿ: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮತ್ತು ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಆಪ್ತ ಸಮಾಲೋಚನೆ ಕುರಿತು ಪ್ರೌಢಶಾಲಾ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರವವನ್ನು ಆಸ್ಪತ್ರೆಯ ಕಮಲ್ ಎ.ಬಾಳಿಗಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕ ಗಣೇಶ್‌ಕೃಷ್ಣ ಭಾಗವತ, ಮಾತನಾಡಿದರು. ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು.
ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯ ಡಾ.ದೀಪಕ್ ಮಲ್ಯ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿ ಸೌಜನ್ಯ ಶೆಟ್ಟಿ ಉಪಸ್ಥಿತರಿದ್ದರು. ಆಸ್ಪತ್ರೆಯ ಪರಿಹಾರ ಬೊಧಕ ಶ್ವೇತ ಪ್ರಾರ್ಥಿಸಿದರು. ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಸ್ವಾಗತಿಸಿದರು. ಆಪ್ತ ಸಮಾಲೋಚಕ ದೀಪಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನಂತರ ನಡೆದ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಪಿ.ವಿ.ಭಂಡಾರಿ, ಆಸ್ಪತ್ರೆಯ ಮನೋವೈದ್ಯ ರಾದ ವಿರುಪಾಕ್ಷ ದೇವರಮನೆ, ಡಾ ದೀಪಕ್ ಮಲ್ಯ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿ ಸೌಜನ್ಯ ಶೆಟ್ಟಿ ಹಾಗೂ ಅಶೋಕ್ ಕಾಮತ್, ಮನಶಾಸ್ತ್ರಜ್ಞ ನಾಗರಾಜ್ ಮೂರ್ತಿ, ಆಪ್ತ ಸಮಾಲೋಚಕಿ ಪದ್ಮ ರಾಘವೇಂದ್ರ, ಹದಿಹರೆಯದ ಮಕ್ಕಳಲ್ಲಿ ಕಂಡುಬರುವ ವರ್ತನಾ ಸಮಸ್ಯೆಗಳು, ಭಾವನಾತ್ಮಕ ಸಮಸ್ಯೆಗಳು ಹಾಗೂ ಮದ್ಯವ್ಯಸನದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ, ಹದಿಹರೆಯದ ಮಕ್ಕಳಲ್ಲಿ ಕಂಡುಬರುವ ವರ್ತನಾ ಸಮಸ್ಯೆಗಳ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು.