ಯಕ್ಷ ರಂಗಾಯಣ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Update: 2025-01-13 15:09 GMT

ಉಡುಪಿ: ಕಾರ್ಕಳ ಯಕ್ಷ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ೩ ಮಂದಿ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-೧, ಬೆಳಕಿನ ವಿನ್ಯಾಸ-೧, ರಂಗಸಜ್ಜಿಕೆ-ಪರಿಕರ-೧) ಹಾಗೂ ೧೨ ಮಂದಿ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಮತ್ತು ತಂತ್ರಜ್ಞರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೨೫ರವರೆಗೆ ವಿಸ್ತರಿಸಿದೆ.

ರಾಷ್ಟ್ರೀಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಹಾಗೂ ರಾಜ್ಯ ಸರಕಾರದ ಅಂಗೀಕೃತ ವಿಶ್ವವಿದ್ಯಾಲಯದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ ಪರಿಣಿತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ.

ಆಸಕ್ತ ಕಲಾವಿದರು ಹಾಗೂ ತಂತ್ರಜ್ಞರನ್ನು ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಕಲಾವಿದರ ವಯಸ್ಸಿನ ಮಿತಿ ೧೮ರಿಂದ ೩೨ ವರ್ಷ ಹಾಗೂ ತಂತ್ರಜ್ಞರಿಗೆ ವಯಸ್ಸಿನ ಮಿತಿ ಇರುವುದಿಲ್ಲ.

ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸ್ವವಿವರದೊಂದಿಗೆ ಜನವರಿ ೨೫ರ ಒಳಗೆ ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ ಕಛೇರಿ, ಕೋಟಿ ಚೆನ್ನಯ ಥೀಂ ಪಾರ್ಕ್, ಕಸಬಾ ಗ್ರಾಮ, ಕಾರ್ಕಳ ತಾಲೂಕು - ೫೭೪೧೦೪, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಅಂಚೆ ಅಥವಾ ಇ-ಮೇಲ್ -yaksharangayana22@gmai.com- ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.ನಂ.9980765355, 9900987866 ಹಾಗೂ 7676501443ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಕಾರ್ಕಳ ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News