ಹಿರಿಯ ನಾಗರಿಕರು ನಾಪತ್ತೆ

Update: 2025-01-13 15:13 GMT

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬವರು ಡಿಸೆಂಬರ್ 1ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News