ಉಲಮಾ ನಿಯೋಗದಿಂದ ಮುಸ್ಲಿಂ ಒಕ್ಕೂಟ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

Update: 2025-01-15 14:21 GMT

ಉಡುಪಿ: ಉಡುಪಿ ತಾಲೂಕಿನ ಉಲಮಾಗಳ ಸಂಘಟನೆ ಜಮಾಅತುಲ್ ಉಲಮಾ ನಿಯೋಗ ಇಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷ ಮುಹಮ್ಮದ್ ಮೌಲಾ ಉಡುಪಿ ಅವರನ್ನು ಒಕ್ಕೂಟದ ಜಿಲ್ಲಾ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನಿಸಿತು.

ಮೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ಮತ್ತು ಮೌಲಾನಾ ಮಸೀಹುಲ್ಲಾ ಖಾನ್ ಕಾಸ್ಮೀ ನೇತೃತ್ವದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನೂತನ ಅಧ್ಯಕ್ಷರಲ್ಲಿ ವಿಚಾರ ವಿನಿಮಯ ಮಾಡಲಾಯಿತು. ತಮ್ಮ ಸಂಘಟನೆಯ ಧ್ಯೇಯೋದ್ದೇಶ ಮತ್ತು ಕಾರ್ಯವಿಧಾನವನ್ನು ವಿವರಿಸುತ್ತಾ ಒಕ್ಕೂಟದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಹಕರಿಸುವುದಾಗಿ ಭರವಸೆ ನೀಡಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ, ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಫರೀದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News