ಹಿರಿಯಡ್ಕ: ಜೈಲು ಬಂಧಿತರಿಗೆ ಉಚಿತ ಕಾನೂನು ಅರಿವು-ನೆರವು

Update: 2025-01-15 14:57 GMT

ಉಡುಪಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಹಿರಿಯಡ್ಕ ಸಮೀಪದ ಅಂಜಾರಿನಲ್ಲಿರುವ ಜಿಲ್ಲಾ ಕಾರಾಗೃಹ ದಲ್ಲಿರುವ ಬಂಧಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂದಿಗಳ ಮನಃ ಪರಿವರ್ತನೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧರವರೆಗೂ ಸ್ವತಂತ್ರ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಜೀವನದಲ್ಲಿ ಮಾಡುವ ತಪ್ಪುಗಳು ಸಹಜ, ಆದರೆ ಅವುಗಳನ್ನು ತಿದ್ದಿ ಕೊಂಡು ಬಂಧಿಗಳು ಮನಪರಿವರ್ತನೆಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಸದಸ್ಯ ರಾಜೇಶ ಆರ್. ಉಡುಪಿ ಹಾಗೂ ಜಿಲ್ಲಾ ಕಾರಾಗೃಹದ ಅಧೀಕ್ಷಕ ಜಯಕುಮಾರ ಚವ್ಹಾಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದರಾದ ಬೆಮಲ್ ಕಂಪಲಪ್ಪ ಅವರು ಹಾಸ್ಯ ಚಟಾಕಿಗಳ ಮೂಲಕ ಬಂಧಿಗಳ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದರು.

ಜಿಲ್ಲಾ ಕಾರಾಗೃಹದ ಸಿಬ್ಬಂದಿಗಳು, ವಿವಿಧ ಕಾರಣಗಳಿಗಾಗಿ ಇಲ್ಲಿ ಬಂಧನದಲ್ಲಿರುವವರು ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News