ಕಾಪುವಿನ ವ್ಯಕ್ತಿ ನಾಪತ್ತೆ

Update: 2025-01-15 15:05 GMT

ಉಡುಪಿ, ಜ.15: ಕಾಪು ಉಳಿಯಾರಗೋಳಿ ಗ್ರಾಮದ ಕಲ್ಯ ಭಾರತ್ ನಗರ ನಿವಾಸಿ ರಾಮ ದೇವಾಡಿಗ (64) ಎಂಬವರು ಜನವರಿ 10ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಉಡುಪಿ ದೂ.ಸಂಖ್ಯೆ: 0820-2526444, 2526709, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805431 ಹಾಗೂ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸ ಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News