ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2025-01-15 15:41 GMT
ಕುಂದಾಪುರ, ಜ.15: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ತಲ್ಲೂರು ಸೇತುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.15ರಂದು ನಸುಕಿನ ವೇಳೆ ನಡೆದಿದೆ.
ಮೃತರನ್ನು ಮೇಘನಾಥ(39) ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮೇಘನಾಥಗೆ ಢಿಕ್ಕಿ ಹೊಡೆದಿದೆ. ಬಳಿಕ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಮೇಘನಾಥ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.