ಬಾರಕೂರು ಕಾಲೇಜಿನ ಏಡ್ಸ್ ಜಾಗೃತಿ ಕಾರ್ಯಕ್ರಮ

Update: 2025-03-19 18:07 IST
ಬಾರಕೂರು ಕಾಲೇಜಿನ ಏಡ್ಸ್ ಜಾಗೃತಿ ಕಾರ್ಯಕ್ರಮ
  • whatsapp icon

ಬಾರಕೂರು: ಏಡ್ಸ್ ಎಂಬ ಮಾರಕ ಕಾಯಿಲೆಯ ಬಗ್ಗೆ ಅರಿವು ಮೂಡಿಸುದರ ಮೂಲಕ ತಡೆಗಟ್ಟುವು ದರಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ ವಾದುದು ಮತ್ತು ಏಡ್ಸ್ ಸಂತ್ರಸ್ತರನ್ನು ಗೌರಪೂರ್ಣವಾಗಿ ನೋಡಿಕೊಂಡು ಅವರ ಬದುಕುವ ಹಕ್ಕನ್ನು ಕಾಪಾಡುವುದು ನಮ್ಮ ಉದ್ದೇಶವಾಗಿರಬೇಕು ಎಂದು ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶಪಾಲ ಡಾ.ಎಸ್.ಭಾಸ್ಕರ ಶೆಟ್ಟಿ ಸಲ್ವಾಡಿ ಹೇಳಿದ್ದಾರೆ.

ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆಕೋಶದ ಸಹಯೋಗದಲ್ಲಿ ಮಾ.15ರಂದು ಆಯೋಜಿಸಲಾದ ಎಡ್ಸ್ ಮತ್ತು ರಕ್ತದಾನದ ಕುರಿತು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ವರ ಬಿ., ಏಡ್ಸ್ ಪಿಡುಗಿನ ಹಿನ್ನಲೆ, ಪ್ರಸ್ತುತ ಪರಿಸ್ಥಿಯಲ್ಲಿ ಯುವ ಸಮುದಾಯ ಈ ಪಿಡುಗಿಗೆ ಗುರಿಯಾಗುವ ಸಾಧ್ಯತೆಗಳು ಮತ್ತು ಎಡ್ಸ್ ಬಗ್ಗೆ ವಹಿಸ ಬೇಕಾದ ಜಾಗ್ರತಿ ಬಗ್ಗೆ ಮನವರಿಕೆ ಮಾಡಿದರು. ರಕ್ತದಾನ ಮಾಡಲು ಮುಂದಾಗುವ ಮೊದಲು ನೀವು ಒಳ್ಳೆಯ ದೈಹಿಕ ಸದೃಢತೆಯ ಜೊತೆಗೆ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಹೇಳಿದರು.

ವಿದ್ಯಾರ್ಥಿ ರಕ್ಷಿತಾ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಧಾಕೃಷ್ಣ ನಾಯಕ್ ವಂದಿಸಿದರು. ಚೈತ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News