ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
Update: 2025-03-22 21:22 IST

ಉಡುಪಿ, ಮಾ.22: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಎಂ.ಜಿ. ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.21ರಂದು ರಾತ್ರಿ 8.30ರ ಸುಮಾರಿಗೆ ನಡೆದಿದೆ.
ಮೃತರನ್ನು ಸಿದ್ದಪ್ಪ(40) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ಸಿದ್ದಪ್ಪಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯ ಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.