ತರಬೇತಿ: ಅರ್ಜಿ ಆಹ್ವಾನ

Update: 2025-03-25 20:17 IST
ತರಬೇತಿ: ಅರ್ಜಿ ಆಹ್ವಾನ
  • whatsapp icon

ಉಡುಪಿ, ಮಾ.25: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್‌ಕ್ರಾಫ್ಟ್ ಇನ್‌ಸ್ಟಿಟ್ಯೂಟ್ (ಎಫ್‌ಸಿಐ) ಮೈಸೂರು ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (ಐಎಚ್‌ಎಂ) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮ ವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಇದರೊಂದಿಗೆ ಮಲ್ಟಿ ಕ್ಯೂಸೈನ್ ಕುಕ್ ವಿಷಯದ ಎರಡನೇ ಹಂತದ ತರಬೇತಿ ಎಪ್ರಿಲ್ 15ರಿಂದ ಪ್ರಾರಂಭವಾಗಲಿದ್ದು, ತರಬೇತಿಗೆ ಸಂಬಂಧಿಸಿ ದಂತೆ ಅಭ್ಯರ್ಥಿಗಳು ಈ ಕೆಳಕಂಡ ವಿಷಯಗಳನ್ನು ಗಮನಿಸಬೇಕು.

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್‌ಗಳಲ್ಲಿ ಕೆಲಸ ಖಾತರಿಯಾಗಿರುತ್ತದೆ. ತರಬೇತಿ ಪಡೆಯುವ ವೇಳೆ ಮಾಸಿಕ 2,000 ರೂ.ಗಳ ಸ್ಟೈಫಂಡ್ ನೀಡಲಾಗುವುದು.ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಗತಿ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್‌ಗಳಲ್ಲಿ ಆನ್ ಜಾಬ್ ಟ್ರೈನಿಂಗ್ ಸಹ ನೀಡಲಾಗುವುದು.

ಐಹೆಚ್‌ಎಂ ಬೆಂಗಳೂರು ಹಾಗೂ ಎಫ್‌ಸಿಐ ಮೈಸೂರು ಸಂಸ್ಥೆಗಳು ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಸರ್ಟಿಫಿಕೇಟ್ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಬಹುದಾಗಿದೆ.

ಆದ್ದರಿಂದ ಮಲ್ಟಿ ಕ್ಯೂಸೈನ್ ಕುಕ್ ಹಾಗೂ ಫುಡ್ ಬೆವರೇಜ್ ಸರ್ವಿಸ್ ಸ್ಟೆವಾರ್ಡ್ ತರಬೇತಿ ಪಡೆಯಲು ಆಸಕ್ತಿ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡಕ್ಕೆ ಸೇರಿದ 20ರಿಂದ 45 ವರ್ಷ ದೊಳಗಿನ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಎಪ್ರಿಲ್ 3ರ ಒಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News