ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
Update: 2025-03-25 21:51 IST

ಗಂಗೊಳ್ಳಿ, ಮಾ.25: ರೈಲು ಢಿಕ್ಕಿ ಹೊಡೆದ ಪರಿಣಾಮ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.24ರಂದು ಸಂಜೆ ವೇಳೆ ಕುಂದಬಾರಂದಾಡಿ ಗ್ರಾಮದ ಹೂವಿನ ಕಂಬಳ ಗದ್ದೆ ಎಂಬಲ್ಲಿ ನಡೆದಿದೆ.
ಮೃತರನ್ನು ತ್ರಾಸಿ ಗ್ರಾಮದ ಹೆರಿಯ(70) ಎಂದು ಗುರುತಿಸಲಾಗಿದೆ. ಕೂಲಿ ಕೆಲಸವನ್ನು ಮುಗಿಸಿಕೊಂಡು ವಾಪಾಸ್ಸು ಮನೆಗೆ ರೈಲ್ವೇ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೆರಿಯ ಅವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.