ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್

Update: 2025-04-01 20:12 IST
ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್
  • whatsapp icon

ಉಡುಪಿ, ಎ.1: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತು ವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಹಳದಿ ಅಲರ್ಟ್ ಜಾರಿಗೊಳಿಸಲಾಗಿದೆ.

ಈ ದಿನಗಳಲ್ಲಿ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಭಾರೀ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ.

ಕೃಷಿಕರು ಸಿಡಿಲಿನ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿರ ಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬರುವ ಸಂದರ್ಭ ದಲ್ಲಿ ಮನೆಯ ಹೊರಗೆ ತಿರುಗಾಡದೇ, ಮನೆ ಹಾಗೂ ಸೂಕ್ತ ಕಟ್ಟಡದೊಳಗೆ ಇರಬೇಕು. ಮೀನುಗಾರರು ನದಿ ಹಾಗೂ ನೀರಿರುವ ಪ್ರದೇಶದಿಂದ ದೂರವಿದ್ದು, ಸಮುದ್ರಕ್ಕೆ ಇಳಿಯದೆ ಎಚ್ಚರ ವಹಿಸಬೇಕು.

ಮಕ್ಕಳು, ಸಾರ್ವಜನಿಕರು ಇಂಥ ಸಂದರ್ಭಗಳಲ್ಲಿ ಅಪಾಯಕಾರಿ ಮರ, ವಿದ್ಯುತ್ ಕಂಬದ ಬಳಿ ಇರಬಾ ರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲ ಕಟ್ಟಡ, ಮರಗಳ ಬಳಿ, ಕೆಳಗೆ ನಿಲ್ಲಬಾರದು.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿಭಾಯಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಳಿಗಾಗಿ ಈಕೆಳಗಿನ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್‌ಗೆ ಕರೆ ಮಾಡಬಹುದು. ತುರ್ತುಸೇವೆಗೆ ಶುಲ್ಕರಹಿತ: 1077, ದೂರವಾಣಿ ಸಂಖ್ಯೆ:0820-2574802.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News