ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಎ.1: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲಕರು ಹಾಗೂ ಅಧಿಭೋಗದಾರರು ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, 2024-25ರಲ್ಲಿ ನಿರ್ಧಾರವಾದ ತೆರಿಗೆಯ ಮೇಲೆ ಶೇ. 3ರಷ್ಟು ತೆರಿಗೆಯನ್ನು ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಹೆಚ್ಚಿಸಲಾಗಿದೆ.
ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲಕರು ಹಾಗೂ ಅಧಿಭೋಗ ದಾರರು 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು, 2024-25ರ ಆಸ್ತಿತೆರಿಗೆಯ ಮೇಲೆ ಶೇ.3ರಷ್ಟು ಹೆಚ್ಚಿಸಿ, ಎಪ್ರಿಲ್ 1ರಿಂದ 30ರ ಒಳಗೆ ಪಾವತಿಸಿದ್ದಲ್ಲಿ ಶೇ.5ರ ರಿಯಾಯಿತಿ ಪಡೆಯ ಬಹುದು. ಮೇ 1ರಿಂದ ಜೂನ್ 30ರವರೆಗೆ ದಂಡ ರಹಿತ ಪಾವತಿಗೆ ಅವಕಾಶವಿದ್ದು, ಜುಲೈ 1ರ ನಂತರ ಪಾವತಿಸಿದ್ದಲ್ಲಿ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳು ಶೇ.2ರಷ್ಟು ದಂಡ ವಿಧಿಸಲಾಗುವುದು.
2024-25ನೇ ಸಾಲಿನ ಹಾಗೂ ಹಿಂದಿನ ಅವಧಿಯ ಆಸ್ತಿ ತೆರಿಗೆ ಪಾವತಿಸದೇ ಇರುವವರು ಶೇ.2ರಷ್ಟು ದಂಡದೊಂದಿಗೆ ಪಾವತಿಸಿ, ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.