ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Update: 2025-04-01 20:37 IST
ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
  • whatsapp icon

ಉಡುಪಿ, ಎ.1: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿಗೆ ಸೇರಿದ ಒಟ್ಟು 40 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ ಸಿ ದೇವಸ್ಥಾನಗಳ ವಿವರ: ಉಡುಪಿ ತಾಲೂಕಿನ ಉದ್ಯಾವರದ ದೇವಸ್ಥಾನಗಳಾದ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀಶಂಭುಕಲ್ಲು ವೀರಭದ್ರ ದೇವಸ್ಥಾನ, ಶ್ರೀಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀಮಹಾಲಿಂಗೇಶ್ವರ ದೇವಸ್ಥಾನ.

ಪೆರಂಪಳ್ಳಿ ಶಿವಳ್ಳಿಯ ಶ್ರೀಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿ ಮಹಾವಿಷ್ಣು ದೇವಸ್ಥಾನ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ. ಆದಿ ಉಡುಪಿಯ ಶ್ರೀಮುಖ್ಯಪ್ರಾಣ ದೇವಸ್ಥಾನ, ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಪುತ್ತೂರು ಗ್ರಾಮದ ಮಡಿ ಮಲ್ಲಿಕಾರ್ಜುನ ದೇವಸ್ಥಾನ

ಕಾಪು ತಾಲೂಕು ಕಟಪಾಡಿ ಚೊಕ್ಕಾಡಿಯ ಮಹಾಲಿಂಗೇಶ್ವರ ದೇವಸ್ಥಾನ, ಮಟ್ಟುನ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ವಿಷ್ಣುಮೂರ್ತಿ ದೇವಸ್ಥಾನ.

ಕಾರ್ಕಳ ತಾಲೂಕು ಬೈಲೂರಿನ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ ವೆಂಕಟರಮಣ ದೇವಸ್ಥಾನ ಹಾಗೂ ಬೋಳ ಪಿಲಿಯೂರಿನ ಮಹಾಲಿಂಗೇಶ್ವರ ದೇವಸ್ಥಾನ.

ಕುಂದಾಪುರ ತಾಲೂಕಿನ ಕೋಣಿ ಮಹಾಲಿಂಗೇಶ್ವರ ದೇವಸ್ಥಾನ, ಹಾರ್ದಳ್ಳಿ-ಮಂಡಳ್ಳಿಯ ಮಲ್ಲಿಕಾರ್ಜುನ ದೇವಸ್ಥಾನ, ಬೆಳಗೋಡು ಮಹಾಲಿಂಗೇಶ್ವರ ದೇವಸ್ಥಾನ, ದೇವಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ, ಬಸ್ರೂರು ಓಂಕಾರೇಶ್ವರ ದೇವಸ್ಥಾನ, ಗುಲ್ವಾಡಿ ಗ್ರಾಮದ ಆಂಜನೇಯ ದೇವಸ್ಥಾನ, ಸಿದ್ದಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ, ಹೊಸಂಗಡಿಯ ಹೊಳೆ ಶಂಕರನಾರಾಯಣ ದೇವಸ್ಥಾನ, ಗುಜ್ಜಾಡಿ ಗ್ರಾಮದ ಶ್ರೀಗುಹೇಶ್ವರ ದೇವಸ್ಥಾನ, ಇಡೂರು ಕುಂಜ್ಞಾಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ದೇವಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ.

ಬೈಂದೂರು ತಾಲೂಕಿನ ಬಡಾಕೆರೆ ಲಕ್ಷ್ಮೀ ಜನಾರ್ದನ ದೇವಸ್ಥಾನ, ಬಿಜೂರು ಅರೆಕಲ್ಲು ಹಿರೆ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಮಟ್ನಕಟ್ಟೆ ಮಹಾಗಣಪತಿ ದೇವಸ್ಥಾನ.

ಬ್ರಹ್ಮಾವರ ತಾಲೂಕಿನ ನೂಜಿಕೆರೆ ವಿನಾಯಕ ದೇವಸ್ಥಾನ, ಕೆಂಜೂರು ಶ್ರೀವೀರೇಶ್ವರ ದೇವಸ್ಥಾನ, ಗೋಪಾಲಕೃಷ್ಣ ದೇವಸ್ಥಾನ, ಚಾಂತಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಹಾವಂಜೆ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹಲುವಳ್ಳಿ ಗೋಪಾಲಕೃಷ್ಣ ದೇವಸ್ಥಾನ.

ಹೆಬ್ರಿ ತಾಲೂಕಿನ ಪಾಂಡುಕಲ್ಲು (ಶಿವಪುರ) ಕೋಟೆನಾಥ ದೇವಸ್ಥಾನ ಹಾಗೂ ಚಾರಾದ ಶ್ರೀಮಷಮರ್ಧಿನೀ ದೇವಸ್ಥಾನ.

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಪ್ರಿಲ್ 17ರ ಒಳಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News