ಕೋಡಿ ಬ್ಯಾರೀಸ್ ನಲ್ಲಿ ಸೌಹಾರ್ದ ಈದ್ ಮಿಲನ್ ಔತಣಕೂಟ
ಕುಂದಾಪುರ, ಎ.1: ಶಾಂತಿ ಹಾಗೂ ಸೌಹಾರ್ದತೆಯನ್ನು ಸಾರುವ ರಂಝಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳುವ ಸೌಹಾರ್ದ ಔತಣ ಕೂಟ ಸಮಾಜದಲ್ಲಿನ ಬಾಂಧವ್ಯ ಹಾಗೂ ಸಾಮರಸ್ಯಕ್ಕೆ ಇನ್ನಷ್ಟು ಶಕ್ತಿ ನೀಡುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಊರಿನಲ್ಲಿ ಒಗ್ಗಟ್ಟು ಹೆಚ್ಚಲಿದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಪಿಟಿಎ ಸದಸ್ಯರುಗಳಿಂದ ಮಂಗಳವಾರ ನಡೆದ ’ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇಯರ್ಮೆನ್ ಸೈಯದ್ ಮೊಹಮ್ಮದ್ ಬ್ಯಾರಿ, ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರೆಹಮಾನ್ ಬ್ಯಾರಿ, ಬ್ಯಾರೀಸ್ ಗ್ರೂಪ್ ಟ್ರಸ್ಟ್‌ನ ಸದಸ್ಯರಾದ ಅಶ್ರಫ್ ಬ್ಯಾರಿ, ಸಿದ್ದೀಕ್ ಬ್ಯಾರಿ, ಡಾ.ಆಸಿಫ್ ಬ್ಯಾರಿ, ಜಯರತ್ನ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ, ಸ್ಥಳೀಯ ಪ್ರಮುಖರಾದ ಕೋಡಿ ಶಂಕರ್ ಪೂಜಾರಿ, ಅಬ್ದುಲ್ ಸಾಹೇಬ್ ಕೋಡಿ, ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ ದೋಮ, ಚಂದ್ರಶೇಖರ ಶೆಟ್ಟಿ , ಶಮಂತ್ ಎಸ್. ಕುಂದಾಪುರ, ಸುಜನ್ ಶೆಟ್ಟಿ, ಸುನೀಲ್ ಪೂಜಾರಿ ಕೋಡಿ, ಮುನಾಫ್ ಕೋಡಿ, ರಿಯಾಝ್ ಕೋಡಿ, ಅಭಿಜಿತ್ ಹೇರಿಕುದ್ರು ಉಪಸ್ಥಿತರಿದ್ದರು. ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ ಮತ್ತು ಬ್ಯಾರೀಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಡಿಗ್ರಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್., ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ, ಬ್ಯಾರೀಸ್ ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಫಿರ್ದೋಸ್, ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಸ್ಮಾರಕ ಸರಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯ ಜಯಶೀಲ ಶೆಟ್ಟಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಟ್ಪಪ್ಪ, ಬೀಬಿ ಫಾತಿಮಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಮಿತ್ರಾ ಹಾಜರಿದ್ದರು.