ಪೊಲೀಸ್ ಕತರ್ವ್ಯದಲ್ಲಿ ಪ್ರಾಮಾಣಿಕತೆ, ಮಾನವೀಯತೆ ಅಗತ್ಯ: ರವಿ ನಾಯ್ಕ
Update: 2025-04-02 17:42 IST

ಉಡುಪಿ, ಎ.2: ನಿವೃತ್ತ ಪೊಲೀಸರಿಗೆ ಪೊಲೀಸ್ ಕ್ಯಾಂಟಿನ್‌ನಲ್ಲಿ ಔಷಧ ಕೊಡುವ ವ್ಯವಸ್ಥೆ ಜಾರಿಗೆ ತರ ಬೇಕು. ಪೊಲೀಸರು ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯತೆ ಮೆರೆಯಬೇಕು ಎಂದು ಉಡುಪಿ ಜಿಲ್ಲಾ ನಿವೃತ್ತ ಡಿ.ಎಸ್.ಪಿ. ರವಿ ನಾಯ್ಕ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಆಯೋಜಿಸಲಾದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ.ಹೆಗಡೆ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ, ಕಾರ್ಕಳದ ಡಿಎಫ್‌ಓ ಶಿವರಾಮ್ ಬಾಬು ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸ್ವಾಗತಿಸಿ, ಪ್ರಾಸ್ತಾವಿಕವಾಗ ಮಾತನಾಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ವಂದಿಸಿದರು. ಸಿಬ್ಬಂದಿ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು. ಈ ವೇಳೆ ಪೊಲೀಸರಿಂದ ಆಕರ್ಷಕ ಕವಾಯತು ನಡೆಯಿತು.