ಉಡುಪಿ: ನಗರಸಭೆಯಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಎ.2: ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಮಾಜಿ ಸದಸ್ಯೆಶಾಮಲಾ ಕುಂದರ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವ ಉದಾಹರಣೆಯನ್ನು ನೀಡಿ ಸಮಾಜದಲ್ಲಿ ಮಹಿಳಾ ಶಕ್ತಿಯ ಬಗ್ಗೆ ಮಾಹಿತಿ ನೀಡಿದರು. ಮಹಿಳೆಯರು ಸಮಾಜದಲ್ಲಿ ಅವರಿಗಾಗಿ ಇರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೌರಕಾರ್ಮಿಕರು ಹಾಗೂ ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸ್ಮರಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರು ಮಹಿಳಾ ದಿನಾಚರಣೆ ಕುರಿತು ತಮ್ಮ ಅನಿಸಿಕೆ ಅಭಿಪ್ರಾಯ ಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ, ನಗರಸಭಾ ಸದಸ್ಯರು ಹಾಗೂ ನಗರಸಭೆಯ ಅಧಿಕಾರಿ ಗಳು, ಮಳಾ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ಸ್ವಾಗತಿಸಿ, ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ವಂದಿಸಿದರು.