ರಾಜ್ಯ ಮಹಿಳಾ ನಿಲಯದಲ್ಲಿ ಮಹಿಳಾ ದಿನಾಚರಣೆ

Update: 2025-04-02 18:34 IST
ರಾಜ್ಯ ಮಹಿಳಾ ನಿಲಯದಲ್ಲಿ ಮಹಿಳಾ ದಿನಾಚರಣೆ
  • whatsapp icon

ಉಡುಪಿ, ಎ.2: ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಇತ್ತೀಚೆಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಮಹಿಳಾ ಸಬಲೀಕರಣದ ಕುರಿತಂತೆ ಉಪನ್ಯಾಸ ನೀಡಿದರು.

ಬ್ರಹ್ಮಾವರದ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 6 ದಿನಗಳ ಕಾಲ ಹಮ್ಮಿಕೊಂಡಿದ್ದ ಕೃತಕ ಆಭರಣ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದ ನಿವಾಸಿ ನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನಿವಾಸಿನಿಯರಿಗೆ ಆಯೋಜಿಸಿದ ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಬ್ರಹ್ಮಾವರದ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಲಕ್ಷ್ಮೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನುರಾಧಾ ಹಾದಿಮನಿ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ, ಸಂಸ್ಥೆಯ ಅಧೀಕ್ಷಕಿ ಪುಷ್ಪಾರಾಣಿ ಎಚ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News