ಗುಂಡೇಟು ಪ್ರಕರಣ: ಇಸಾಕ್ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

Update: 2025-04-02 21:05 IST
ಗುಂಡೇಟು ಪ್ರಕರಣ: ಇಸಾಕ್ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ
  • whatsapp icon

ಉಡುಪಿ, ಎ.2: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗುಂಡೇಟು ಪ್ರಕರಣದ ಆರೋಪಿ, ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿಯನ್ನು ಉಡುಪಿ ನ್ಯಾಯಾಲಯವು ಎ.4ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ಉಡುಪಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಎ.1ರವರೆಗೆ ಕಸ್ಟಡಿಗೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಇದೀಗ ಆತನನ್ನು ನ್ಯಾಯಾಲ ಯಕ್ಕೆ ಹಾಜರು ಪಡಿಸಿದ್ದು, ತನಿಖೆ ಬಾಕಿ ಇರುವ ಕಾರಣ ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯ ಆತನ ಪೊಲೀಸ್ ಕಸ್ಟಡಿ ಅವಧಿಯನ್ನು ಎ.4ರವರೆಗೆ ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News