ರಾಜ್ಯ ರೆಡ್‌ಕ್ರಾಸ್‌ನ ನೂತನ ಸಭಾಪತಿ ರಾಜೀವ್ ಶೆಟ್ಟಿಗೆ ಅಭಿನಂದನೆ

ಉಡುಪಿ: ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ನೂತನ ಸಭಾಪತಿಯಾಗಿ ಆಯ್ಕೆಯಾದ ಬಸ್ರೂರು ರಾಜೀವ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ವನ್ನು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಆಯೋಜಿಸಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸ್ರೂರು ರಾಜೀವ ಶೆಟ್ಟಿ, ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನ ವಾಗಿ ನೋಡಿಕೊಳ್ಳುವುದರೊಂದಿಗೆ ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ಮಾತನಾಡಿ, ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದ ಬಸ್ರೂರು ರಾಜೀವ ಶೆಟ್ಟಿ ಸೇವಾ ಅನುಭ ವವನ್ನು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಸಿಕೊಂಡು ಹೋಗುತ್ತಾರೆ ಎಂಬ ಆಶಾ ಭಾವನೆ ನಮ್ಮಲ್ಲಿದೆ. ರೆಡ್‌ಕ್ರಾಸ್ ಸಂಸ್ಥೆ ಮೂಲಕ ರಾಜ್ಯಕ್ಕೆ ವಿದ್ಯಾರ್ಥಿ ಶಕ್ತಿಯನ್ನು ಪಸರಿಸುವ ಕೆಲಸ ಮಾಡಲಿ ಎಂದು ಹಾರೈಸಿದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿ, ರಾಜೀವ್ ಶೆಟ್ಟಿ ಅವರು ಸಮಾಜಮುಖಿ ಕಾರ್ಯ ವನ್ನು ಅಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಅವರ ಈ ಉತ್ತಮ ಸೇವೆಗೆ ಉನ್ನತ ಸ್ಥಾನ ದೊರಕಿರುವುದು ಸಂತೋಷದ ವಿಷಯ ಎಂದರು.
ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಶುಭ ಹಾರೈಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿ ಕಾರಿ ರತ್ನ ಸುವರ್ಣ, ರಾಜ್ಯ ರೆಡ್‌ಕ್ರಾಸ್ ರಾಜ್ಯ ಪ್ರತಿನಿಧಿಗಳಾಗಿದ್ದ ವಿ.ಜಿ.ಶೆಟ್ಟಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾಧಿಕಾರಿ ಶಿವಾಜಿ.ಎ.ಕೆ, ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್, ಮಾಜಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ರತ್ನಾಕರ ಶೆಟ್ಟಿ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರೆ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.
