ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಧರಣಿ

ಉಡುಪಿ: ರಾಜ್ಯದ ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಈಡೇರಿಸು ವಂತೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಲಾಯಿತು.
ಅಸೋಸಿಯೇಷನ್ ಉಡುಪಿ ಜಿಲ್ಲಾಧ್ಯಕ್ಷ ಬಿ.ಗೋವಿಂದರಾಜ್ ಹೆಗ್ಡೆೆ ಮಾತನಾಡಿ, ಚಿಲ್ಲರೆ ಮದ್ಯ ಮಾರಾ ಟದ ಮೇಲೆ ಕನಿಷ್ಠ ಶೇ.20 ಲಾಭಾಂಶ ನೀಡಬೇಕು. ಹೆಚ್ಚುವರಿ ಅಬಕಾರಿ ಶುಲ್ಕವನ್ನು ಕಡಿಮೆ ಮಾಡ ಬೇಕು. 2005ರಲ್ಲಿ ತಿದ್ದುಪಡಿಯಾಗಿರುವ ಅಬಕಾರಿ ಕಾಯ್ದೆಯನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡ ಬೇಕು. ಮಿಲಿಟರಿ ಕ್ಯಾಂಟೀನ್ ಸ್ಟೋರ್‌ಗಳ, ಡ್ಯೂಟಿ ಫ್ರೀ ಹೆಸರಿನಲ್ಲಿ ಬರುವ ನಕಲಿ ಮದ್ಯ, ಗೋವಾ ದಿಂದ ಬರುವ ಮದ್ಯ ಮತ್ತು ನಕಲಿ ಮದ್ಯ ತಯಾರಕರ ಕಳ್ಳಭಟ್ಟಿ ಕೇಂದ್ರಗಳ ಬಗ್ಗೆ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗಳನ್ನು 2024ರ ನವೆಂಬರ್ ತಿಂಗಳಿನಲ್ಲಿ ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ 5 ತಿಂಗಳು ಕಳೆದರೂ ಇನ್ನು ಕೂಡ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ ನಲ್ಲಿಯೂ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೇಡಿಕೆಗಳು ಈಡೇರದಿದ್ದರೆ ಮುಂದೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಸಲ್ಲಿಸಲಾಯಿತು.
ಧರಣಿಯಲ್ಲಿ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಎಂ.ಪೂಜಾರಿ, ಉಡುಪಿ ತಾಲೂಕು ಗೌರವಾಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕಾರ್ಕಳ ತಾಲೂಕು ಕೋಶಾಧಿಕಾರಿ ನವೀನ್ ಚಂದ್ರ ಶೆಟ್ಟಿ, ಉಡುಪಿ ತಾಲೂಕು ಸಂಘಟನ ಕಾರ್ಯದರ್ಶಿ ಮಹೇಶ್ ಅಂಚನ್ ಕಟಪಾಡಿ, ಕುಂದಾಪುರ ತಾಲೂಕು ಖಜಾಂಚಿ ವಾಜುರಾಜ ಶೆಟ್ಟಿ, ಉಡುಪಿ ತಾಲೂಕು ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕಾರ್ಯ ದರ್ಶಿ ಶಿವಪ್ರಸಾದ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷ ಶೋಧನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷ ರೋಹಿತ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿಿತರಿದ್ದರು.