ಡೌನ್ ಸಿಂಡ್ರೋಮ್ ಕುರಿತು ರಾಜ್ಯಮಟ್ಟದ ಕಾರ್ಯಾಗಾರ

ಉಡುಪಿ, ಎ.5: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೌಮಾರ ಭೃತ್ಯ ವಿಭಾಗದ ವತಿಯಿಂದ ಡೌನ್ ಸಿಂಡ್ರೋಮ್ ಜಾಗತಿಕ ಸಂಪ್ರದಾಯ ಹಾಗೂ ಸ್ಥಳೀಯ ಪ್ರಭಾವ ರಾಜ್ಯಮಟ್ಟದ ಕಾರ್ಯಾಗಾರವನ್ನು ಇತ್ತೀಚೆಗೆ ಕಾಲೇಜಿನ ಕೌಮಾರಭೃತ್ಯ ವಿಭಾಗದಲ್ಲಿ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ., ಆಯುರ್ವೇದದಲ್ಲಿ ಉಲ್ಲೇಖಿ ಸಲಾದ ಬೀಜ, ಬೀಜ ಭಾಗ ಮತ್ತು ಬೀಜ ಭಾಗ ಆವಯವ ದುಷ್ಟಿಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಮೆಡಿಕಲ್ ಜೆನೇಟಿಕ್ಸ್, ಸಹಾಯಕ ಪ್ರಾಧ್ಯಾಪಕ ಡಾ.ವಿವೇಕಾನಂದ ಭಟ್, ಡೌನ್ ಸಿಂಡ್ರೋಮಿನ ಲಕ್ಷಣಗಳು, ಅದರ ವಿಧಾನಗಳು, ಪೋಷಕರಲ್ಲಿ ಕಂಡು ಬರುವ ಆತಂಕಗಳು ಹಾಗೂ ಮುನ್ನೆಚ್ಚರಿಕೆಗಳು ಮತ್ತು ಅದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಯೆನಾಪೋಯ ಆಯುರ್ವೇದ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಸಿಂಧು, ಹೈಟೆಕ್ ಆಸ್ಪತ್ರೆಯ ನವಜಾತ ಶಿಶು ತಜ್ಞರು ಹಾಗೂ ಮಕ್ಕಳ ತಜ್ಞ ಡಾ.ಜನಾರ್ದನ ಪ್ರಭು ಮಾತನಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್. ಉಪಸ್ಥಿತರಿದ್ದರು. ಬಾಲರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಚಿತ್ರಲೇಖಾ ಕಾರ್ಯಕ್ರಮ ಸಂಯೋಜಿಸಿದರು.
ಸಹ ಪ್ರಾಧ್ಯಾಪಕಿ ಡಾ.ಸಹನಾ ಶಂಕರಿ ಹಾಗೂ ಸಹಾಯಕ ಪ್ರಾಧ್ಯಾಪಕಿ ಡಾ.ಕಾವ್ಯ ಸಹಕರಿಸಿದರು. ಮುಖ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥ ಡಾ.ಪೃಥ್ವಿರಾಜ್ ಪುರಾಣಿಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ಡಾ.ಲಿಖಿತ ಎಂ.ವಿ. ಮತ್ತು ಡಾ.ವೈಷ್ಣವಿ ನಿರೂಪಿಸಿದರು. ರಾಜ್ಯದ ವಿವಿಧ ವಿದ್ಯಾಲಯ ಗಳಿಂದ ಒಟ್ಟು 35 ಪ್ರತಿನಿಧಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.