ಬಾಬು ಜಗಜೀವನರಾಂ ಜೀವನಮೌಲ್ಯ ಆದರ್ಶಪ್ರಾಯ: ಸಂಸದ ಕೋಟ

Update: 2025-04-05 20:17 IST
ಬಾಬು ಜಗಜೀವನರಾಂ ಜೀವನಮೌಲ್ಯ ಆದರ್ಶಪ್ರಾಯ: ಸಂಸದ ಕೋಟ
  • whatsapp icon

ಉಡುಪಿ, ಎ.5: ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಬಾಬು ಜಗಜೀವನ ರಾಮ್‌ರ ಜೀವನ ಮೌಲ್ಯ ಸರ್ವಕಾಲಕ್ಕೂ ಆದರ್ಶಪ್ರಾಯ ಎಂದು ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಗಜೀವನ ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಸುಮಾರು ಒಂದು ಶತಮಾನದ ಹಿಂದೆ ಸಾಮಾಜಿಕ ನ್ಯಾಯದ ಕಲ್ಪನೆಯೇ ಇಲ್ಲದೇ, ಸಮಾಜದಲ್ಲಿ ಅಸ್ಪಶ್ಯತೆ, ಜಾತಿಪದ್ಧತಿ ತಾಂಡವವಾಡುತ್ತಿದ್ದಾಗ ಸಮಾನತೆ ಕನಸಾಗಿದ್ದ ಸಂದರ್ಭದಲ್ಲಿ ಇವುಗಳ ವಿರುದ್ಧ ಹೋರಾಡಿ, ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ. ಎಲ್ಲಾ ಅವಮಾನಗಳನ್ನು ಎದುರಿಸಿ, ಆತಂಕಗಳನ್ನು ನಿವಾರಿಸಿಕೊಂಡು ಅತ್ಯಂತ ಪ್ರಮುಖ ಸ್ಥಾನವನ್ನು ಅಲಂಕರಿಸುವ ಮೂಲಕ ಸಮಾಜ ದಲ್ಲಿ ಸಮಾನತೆಯ ಸಂಕೇತವಾದ ಸ್ಥಾನದಲ್ಲಿರುವವರಲ್ಲಿ ಜಗಜೀವನ್‌ರಾಂ ಕೂಡ ಒಬ್ಬರು ಎಂದರು.

ದೇಶದಲ್ಲಿ ಬರಗಾಲ ಬಂದ ಸಂದರ್ಭದಲ್ಲಿ ಕೃಷಿ ಮಂತ್ರಿ ಆಗಿದ್ದ ಅವರು ಯಾರೂ ಊಹಿಸದ ರೀತಿಯಲ್ಲಿ ಆಹಾರ ಉತ್ಪಾದನೆ ಹಾಗೂ ಆಹಾರದ ವಿತರಣೆ ಮಾಡಿದ್ದಾರೆ. ಕಾರ್ಮಿಕ ಮಂತ್ರಿಯಾಗಿ ಸಮಾಜದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಜನರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡಿ ದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅವರ ಸಮಕಾಲೀನರಾದ ಡಾ. ಬಾಬು ಜಗಜೀವನ ರಾಮ್ ಕೇಂದ್ರದ ಕಾರ್ಮಿಕ ಹಾಗೂ ರಕ್ಷಣಾ ಸಚಿವರಾಗಿದ್ದಾಗ ದೂರದೃಷ್ಟಿಯಿಂದ ತೆಗೆದುಕೊಂಡ ನಿಲುವುಗಳು ಹಾಗೂ ರೂಪಿಸಿದ ಕಾನೂನು ಗಳು ಆಡಳಿತ ವ್ಯವಸ್ಥೆಗೆ ಮಾದರಿಯಾಗಿರುವಂತದ್ದು ಎಂದರು.

ಅಜ್ಜರಕಾಡು ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ನಿಕೇತನ ವ್ಯಕ್ತಿಯೇ ಶಕ್ತಿಯಾದ ಡಾ. ಬಾಬು ಜಗಜೀವನ ರಾಮ್ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಸುಮಾರು ಮೂವತ್ತು ವರ್ಷಗಳ ಕಾಲ ವಿವಿಧ ಸಚಿವರಾಗಿ, ಉಪಪ್ರಧಾನಿಯಾಗಿ ಆಡಳಿತ ನಿರ್ವಹಿಸಿದ ಅವರು, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಮಾಜವಾದಿ ಸಿದ್ಧಾಂತದ ನಿಲುವಿನೊಂದಿಗೆ ಜೀವನ ವನ್ನು ಮುನ್ನಡೆಸಿಕೊಂಡು ಬಂದ ಧೀಮಂತ ಪ್ರತಿಭೆ ಎಂದು ಅಭಿಪ್ರಾಯ ಪಟ್ಟರು.

ಶತಮಾನದ ಹಿಂದೆ ಜಾತ್ಯಾತೀತ ನಿಲುವನ್ನು ಪ್ರತಿಪಾದನೆ ಮಾಡುವ ಸಂದರ್ಭದಲ್ಲಿ ವ್ಯಕ್ತಿಯಾಗಿ ಶಕ್ತಿಯಾಗಿ ಪ್ರಭಾವ ಬೀರಿದ್ದವರು ಅವರ ಪೋಷಕರು. ಬಾಲ್ಯದಲ್ಲಿಯೇ ತುಂಟಾಟದ ಹುಡುಗನಾಗಿದ್ದ ಜಗಜೀವನ ರಾಮ್, ಪ್ರತಿಯೊಬ್ಬರ ಮಾತುಗಳನ್ನು ತಾಳ್ಮೆಯಿಂದ ಆಲಿಸುವ ಮನೋವ್ಯಕ್ತಿತ್ವ ಹೊಂದಿ ದ್ದರು. ಅವರ ಮಾನವೀಯ ನೆಲೆಯ ಆಲೋಚನೆ ಗಳು ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಎಲ್ಲರಿಗೂ ಪ್ರೇರಣೆ ಯಾಗಿದ್ದವು ಎಂದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ ಎಂ, ಸ್ವಾಗತಿಸಿ, ವಂದಿಸಿದರು, ವಾರ್ಡನ್ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News