ರೆಡ್‌ಕ್ರಾಸ್ ಸಭಾಪತಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಅಭಿನಂದನೆ
Update: 2025-04-05 20:21 IST

ಉಡುಪಿ, ಎ.5: ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ 3ನೇ ಬಾರಿಗೆ ಆಯ್ಕೆಯಾದ ಬಸ್ರೂರು ರಾಜೀವ್ ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರೆಡ್‌ಕ್ರಾಸ್ ಅಧ್ಯಕ್ಷರಾದ ಡಾ.ಕೆ.ವಿದ್ಯಾ ಕುಮಾರಿ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ರೆಡ್‌ಕ್ರಾಸ್‌ನ ಜಿಲ್ಲಾ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಸಲಹೆ ಪಡೆಯಲಾಯಿತು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಉಪಸ್ಥಿತರಿದ್ದರು.