ಬ್ರಹ್ಮಾವರ ಪ್ಲೈಓವರ್ ಬಗ್ಗೆ ತಾಂತ್ರಿಕ ಸಮಿತಿ ವರದಿಯಂತೆ ಕ್ರಮ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2025-04-05 20:30 IST
ಬ್ರಹ್ಮಾವರ ಪ್ಲೈಓವರ್ ಬಗ್ಗೆ ತಾಂತ್ರಿಕ ಸಮಿತಿ ವರದಿಯಂತೆ ಕ್ರಮ: ಉಡುಪಿ ಡಿಸಿ ವಿದ್ಯಾಕುಮಾರಿ
  • whatsapp icon

ಉಡುಪಿ, ಎ.5: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಿಸುವ ಕುರಿತು ತಾಂತ್ರಿಕ ಸಮಿತಿ ನೀಡುವ ವರದಿಯಂತೆ ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಶಾಲಾ ವಿದ್ಯಾರ್ಥಿ ಮೃತಪಟ್ಟಿ ರುವುದು ವಿಷಾದದ ಸಂಗತಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರೀತಿಯ ಘಟನೆ ಪದೇ ಪದೇ ಆಗುತ್ತಿದೆ. ಈಗಾಗಲೇ ಈ ಕುರಿತು ಪರಿಶೀಲಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೋಲಿಸ್, ಲೋಕೋಪಯೋಗಿ, ಕಂದಾಯ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ ಎಂದರು.

ಫ್ಲೈ ಓವರ್, ಅಂಡರ್ ಪಾಸ್ ರಚನೆಯ ಸಾಧ್ಯತೆ ಕುರಿತು ಈ ಸಮಿತಿ ಪರಿಶೀಲನೆ ನಡೆಸಲಿದ್ದು, ಈ ಸಂಬಂಧ ಎ.7ರೊಳಗೆ ವರದಿ ಬರಲಿದೆ. ಆ ವರದಿಯ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾ ಗುವುದು. ಎ.8ರಂದು ಈ ಸಂಬಂಧ ಸಭೆ ಕರೆದು ಚರ್ಚಿಸಲಾಗುವುದು. ಇದೀಗ ಅಲ್ಲಿ ತಾತ್ಕಾಲಿಕವಾಗಿ ಸರ್ವಿಸ್ ರಸ್ತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News