ಬಿಜೆಪಿ ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಸ್ಮರಣೀಯ: ವಿಜಯಕುಮಾರ್

ಉಡುಪಿ, ಎ.7: ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ರವಿವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾಜಿ.ಸುವರ್ಣ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಛೇರಿಯ ಮುಂಭಾಗದಲ್ಲಿ ಪಕ್ಷದ ಧ್ವಜರೋಹಣವನ್ನು ನೆರವೇರಿಸಲಾಯಿತು.