ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸಹಸವಾರ ಮೃತ್ಯು
Update: 2025-04-07 21:54 IST

ಗಂಗೊಳ್ಳಿ, ಎ.7: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಗುಜ್ಜಾಡಿ ಗ್ರಾಮದ ಕೊಡಪಾಡಿ ಮಾರಿಕಾಂಬಾ ದೇವಸ್ಥಾನದ ಹತ್ತಿರ ಎ.6ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮೊಹಮ್ಮದ್ ಕೈಸ್ ಕಿದಿಯೂರು ಎಂದು ಗುರುತಿಸಲಾಗಿದೆ. ಸವಾರ ಆಸಾಸ್ ಗಾಯಗೊಂಡಿ ದ್ದಾರೆ. ಇವರು ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿ ತ್ತೆನ್ನ ಲಾಗಿದೆ. ಇದರಿಂದ ಇಬ್ಬರು ರಸ್ತೆಗೆ ಬಿದ್ದು ಗಾಯಗೊಂಡರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಕೈಸ್ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.