ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿ ಮೃತ್ಯು

Update: 2025-04-07 22:01 IST
ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿ ಮೃತ್ಯು
  • whatsapp icon

ಬ್ರಹ್ಮಾವರ, ಎ.7: ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹನೇಹಳ್ಳಿ ಗ್ರಾಮದ ಉದ್ದಲ್ ಗುಡ್ಡೆ ಎಂಬಲ್ಲಿ ನಡೆದಿದೆ.

ಮೃತರನ್ನು ಶಿವರಾಮ (69) ಎಂದು ಗುರುತಿಸಲಾಗಿದೆ. ಇವರು ಎ.5ರಂದು ಮನೆಯ ಮೇಲ್ಛಾವಣಿಗೆ ಹಾಸಿದ ಸಿಮೆಂಟ್ ಸೀಟನ್ನು ನೋಡಲು ಹೋಗಿದ್ದು, ಈ ವೇಳೆ ಅಕಸ್ಮಿಕವಾಗಿ ಆಯತಪ್ಪಿ 12 ಅಡಿ ಎತ್ತರದಿಂದ ಕೆಳಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಚಿಕಿತ್ಸೆ ಫಲಕಾರಿ ಯಾಗದೆ ಎ.6ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News