ಹಿರಿಯಡ್ಕ: ಸಹೋದರಿಯರಿಬ್ಬರು ನಾಪತ್ತೆ

Update: 2025-04-09 22:09 IST
ಹಿರಿಯಡ್ಕ: ಸಹೋದರಿಯರಿಬ್ಬರು ನಾಪತ್ತೆ
  • whatsapp icon

ಉಡುಪಿ, ಎ.9: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಎಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಮಂಜುಳಾ ಅವರು 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರಿಗೆ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದಾರೆ.

ಮಲ್ಲಿಕಾ (18) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಹತ್ತನೇ ತರಗತಿವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯ ಲ್ಲಿಯೇ ಇದ್ದಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News