ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2025-04-10 20:36 IST

ಶಂಕರನಾರಾಯಣ, ಎ.10: ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ಅಂಪಾರು ಗ್ರಾಮದ ಆನಂದ ಎಂಬವರ ಮಗ ಸುಬ್ರಹ್ಮಣ್ಯ(33) ಎಂಬವರು ಶರಾಬು ಕುಡಿಯಲು ಹಣ ಇಲ್ಲದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡು ಎ.9ರಂದು ಸಂಜೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ, ಎ.10: ಅನಾರೋಗ್ಯದಿಂದ ಬಳಲುತ್ತಿದ್ದ ಶಿರಿಯಾರ ಗ್ರಾಮದ ಪುಟ್ಟಯ್ಯ (78) ಎಂಬವರು ಎ.10ರಂದು ಬೆಳಗ್ಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.