ಬೈಕ್ ಡಿಕ್ಕಿ: ಪಾದಚಾರಿ ಮೃತ್ಯು
Update: 2025-04-11 22:23 IST

ಕೋಟ, ಎ.11: ಬೈಕೊಂದು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ (62) ಎಂದು ಗುರುತಿಸಲಾಗಿದೆ.
ಸಾಲಿಗ್ರಾಮದಿಂದ ತೆಕ್ಕಟ್ಟೆಯತ್ತ ಹೋಗುತಿದ್ದ ಬೈಕ್, ಚಾಲಕನ ನಿಯಂತ್ರಣ ತಪ್ಪಿ ಕೋಟ ಪೆಟ್ರೋಲ್ ಬಂಕ್ ಸಮೀಪ ಹೆದ್ದಾರಿ ಬದಿ ನಡೆದುಕೊಂಡು ಹೋಗುತಿದ್ದ ಚಂದ್ರಶೇಖರ್ ಶೆಟ್ಟಿ ಅವರಿಗೆ ನೇರವಾಗಿ ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾರೆ.
ಬೈಕ್ ಸವಾರರಾದ ಸಾಲಿಗ್ರಾಮದ ಪೃಥ್ವಿಶ್ ದೇವಾಡಿಗ ಹಾಗೂ ಶಶಾಂಕ್ ದೇವಾಡಿಗ ಅವರಿಗೂ ಗಾಯಗಳಾಗಿವೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.