ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ: ಪ್ರಸಾದ್ ರೈ

ಹೆಬ್ರಿ, ಎ.13: ಮೊಬೈಲ್ ಟಿವಿಯಿಂದ ವ್ಯರ್ಥ ಕಾಲಹರಣ ಮಾಡುವ ಬದಲು ಬದುಕು ಶಿಕ್ಷಣ ಜೊತೆ ಮನರಂಜನೆ ನೀಡುವ ವೈವಿಧ್ಯಯಯ ಬೇಸಗೆ ಶಿಬಿರಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಮಕ್ಕಳ ಪ್ರತಿಭೆಗಳು ಹೊರಬರಲು ಸಾಧ್ಯ ಎಂದು ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ ಹೇಳಿದ್ದಾರೆ.
ಹೆಬ್ರಿ ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಆಕಾಡೆಮಿ ಆಶ್ರಯದಲ್ಲಿ ಹೆಬ್ರಿ ಚಾಣಕ್ಯ ಟ್ಯೂಟೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿರುವ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಿಗೆ ರಜಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಎಸ್.ಆರ್.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ನವೀನ್ ಅಡ್ಯಂತಾಯ, ನಿವೃತ್ತ ಮುಖ್ಯ ಶಿಕ್ಷಕ ಹರಿದಾಸ್ ಹೆಗ್ಡೆ ಮಾತನಾಡಿದರು. ಅಧ್ಯಕ್ಷತೆಯನ್ನು ಚಾಣಕ್ಯ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ವಹಿಸಿದ್ದರು.
ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಕಾರಿ ನಿತ್ಯಾನಂದ ಶೆಟ್ಟಿ, ಹೆಬ್ರಿ ಜೇಸಿಐ ಅಧ್ಯಕ್ಷೆ ಸೋನಿ ಪಿ.ಶೆಟ್ಟಿ, ನಿತ್ಯಾನಂದ ಭಟ್, ಆಶಾ ಹೆಬ್ಬಾರ್, ಶೀಲಾ ಮೊದಲಾದವರು ಉಪಸ್ಥಿತರಿದ್ದರು. ಉದಯಕುಮಾರ್ ಶೆಟ್ಟಿ ಸ್ವಾಗತಿಸಿದರು. ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಶೆಟ್ಟಿ ವಂದಿಸಿದರು.