ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ; ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ

ಉಡುಪಿ, ಎ.14: ತಾಲೂಕಿನ 80 ಬಡಗಬೆಟ್ಟು ಗ್ರಾಮದ ಮಣಿಪಾಲ ತಾಂಗೋಡೆ 2ನೇ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ವ್ಯಕ್ತಿ ಆರೀಬ್ ಅಹಮ್ಮದ್ (31) ಆಂದ್ರ ಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಬಂದಿದ್ದ. ಆತನಿಂದ ಗಾಂಜಾ ಪಡೆಯಲು ಅಪರಿಚಿತರು ಬರುತ್ತಾರೆ ಎಂಬ ಬಗ್ಗೆ ದೊರೆತ ಮಾಹಿತಿ ಮೇರೆಗೆ ಪೊಲೀಸರು ಕಾದು ಕುಳಿದ್ದರು.
ಆಪಾದಿತರ ಬಳಿ ಇದ್ದ ಯಾವುದೇ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 7.304 ಕಿ.ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದು ಗಾಂಜಾದ ಅಂದಾಜು ಮೌಲ್ಯ 5,75,000 ರೂ. ಎಂದು ಅಂದಾಜಿಸಲಾಗಿದೆ. ಅಲ್ಲದೇ ಆರೋಪರಿಯಿಂದ 2 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತ ವಿಜಯವಾಡದ ಸೈಕಲ್ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿ ದ್ದಾನೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.