ಗಾಳಿ-ಮಳೆಯಿಂದ ಮನೆಗೆ ಹಾನಿ; ಸ್ಥಳಕ್ಕೆ ಶಾಸಕ ಕಿರಣ್ ಕೊಡ್ಗಿ ಭೇಟಿ
Update: 2025-04-15 22:36 IST

ಕುಂದಾಪುರ, ಎ.15: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹನೇಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ ಮಳೆಗೆ ಹನೇಹಳ್ಳಿ ಗ್ರಾಪಂ ವ್ಯಾಪ್ತಿಯ 3ನೇ ವಾರ್ಡಿನ ಮೂಡು ತೋಟದ ಚಂದು ಪೂಜಾರ್ತಿ ಅವರ ಮನೆ ಸಂಪೂರ್ಣ ಹಾನಿಯಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳಿಗೆ ಶಾಸಕರು ಸೂಕ್ತ ಪರಿಹಾರ ಕಲ್ಪಿಸಿ ಕ್ರಮ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್, ಗ್ರಾಪಂ ಅಧಿಕಾರಿಗಳು, ಸದಸ್ಯರು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.