ಸಂವಿಧಾನ ಪಾಲನೆ ಡಾ.ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಪ್ರೊ.ಪ್ರಶಾಂತ

ಉಡುಪಿ, ಎ.16: ಸಂವಿಧಾನದ ಮೌಲ್ಯಗಳನ್ನು ಸರಿಯಾಗಿ ಅರಿತು ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ನಾವು ನೀಡುವ ನಿಜವಾದ ಗೌರವ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನೀಲಾವರ ಹೇಳಿದ್ದಾರೆ.
ನಗರದ ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯ ಸಭಾಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮ ಉದ್ಘಾಟಿಸಿದ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವ ವನ್ನು ಅರ್ಥ ಮಾಡಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ ಎಂದರು.
ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಜಿ.ಶಂಕರ್ ಸ.ಮ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಪ್ರಸಾದ್, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ವಿ.ಜಿ.ಶೆಟ್ಟಿ. ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಡಾ. ರಘು ನಾಯ್ಕ್ ಹಾಗೂ ನಾಗರಾಜ ಜಿ.ಪಿ, ರೆಡ್‌ಕ್ರಾಸ್ ಸಂಯೋಜಕ ಡಾ. ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿಗರೆ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ಕಾರ್ಯಕ್ರಮ ನಿರೂಪಿಸಿದರು. ರೆಡ್‌ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಿಂದ ಶಾಂತಿ ಸೌಹಾರ್ದತಾ ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರಪ್ರಸಾದ್ ಚಾಲನೆ ನೀಡಿದರು. ಕಾಲೇಜಿನಿಂದ ರೆಡ್‌ಕ್ರಾಸ್ ಭವನದವರೆಗೆ ವಿದ್ಯಾರ್ಥಿಗಳ ಜಾಥಾನಡೆಯಿತು.