ಕೊಲ್ಲೂರು: ವ್ಯಕ್ತಿ ನಾಪತ್ತೆ
Update: 2025-04-16 21:41 IST

ಉಡುಪಿ, ಎ.16: ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಮಠ ನಿವಾಸಿ ಮೋಹನ್ ರಾಮ್ ಹೆಗ್ಡೆ (ಈಗ 52) ಎಂಬವರು 2019ರ ಎ.1ರಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ಮನೆಗೆ ಮರಳದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಮಲಯಾಳಂ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ :100 (0820- 2526444) ಅನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.