ಸಾಲಿಗ್ರಾಮ ಪ.ಪಂ.: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ

ಉಡುಪಿ, ಎ.17: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಎಲ್ಲಾ ಉದ್ದಿಮೆದಾರರ 2025-26ನೇ ಸಾಲಿನ ಉದ್ಯಮ ಪರವಾನಿಗೆ ನವೀಕರಣ ಅವಧಿಯು ಎಪ್ರಿಲ್ ತಿಂಗಳಿನಿಂದ ಪ್ರಾರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯಮ ನಡೆಸುತ್ತಿರುವ ಉದ್ಯಮದಾರರು ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ನಿಗದಿತ ದಾಖಲೆ ಸಹಿತ ಆನ್‌ಲೈನ್ ತಂತ್ರಾಂಶದ ಮೂಲಕ ಅಥವಾ ಪಟ್ಟಣ ಪಂಚಾಯತ್‌ಗೆ ಅರ್ಜಿ ನಮೂನೆ ಸಹಿತ ನಿಗದಿತ ದಾಖಲೆ ಸಲ್ಲಿಸಿ ಉದ್ಯಮ ಪರವಾನಿಗೆ ನವೀಕರಿಸಿಕೊಳ್ಳಬಹುದು.
ನಿಗದಿತ ಅವಧಿಯಲ್ಲಿ ಉದ್ಯಮ ಪರವಾನಿಗೆ ನವೀಕರಿಸದಿದ್ದಲ್ಲಿ ಅಧಿಸೂಚನೆಯಂತೆ ನಿಗದಿತ ದಂಡ ಸಹಿತ ಬಾಕಿ ಶುಲ್ಕವನ್ನು ಪಾವತಿಸಬೇಕು. ಈಗಾಗಲೇ ಉದ್ಯಮ ಸ್ಥಗಿತಗೊಳಿಸಿದ್ದಲ್ಲಿ ಪಟ್ಟಣ ಪಂಚಾಯತ್‌ಗೆ ಲಿಖಿತವಾಗಿ ಅರ್ಜಿ ಸಲ್ಲಿಸಿ, ದಂಡನೆ ಸಹಿತ ಬಾಕಿ ಶುಲ್ಕ ಪಾವತಿಸಿ ಉದ್ಯಮ ಪರವಾನಿಗೆ ಯನ್ನು ರದ್ದುಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಇಂಥ ಉದ್ಯಮದಾರ ರನ್ನು ಪ್ರತಿವಷರ್ ಬಾಕಿದಾರರೆಂದು ಪರಿಗಣಿಸಿ ಕಾನೂನು ರೀತ್ಯಾ ದಂಡ ಸಹಿತ ಬಾಕಿ ಶುಲ್ಕ ವಸೂಲಿಗೆ ಮಾಡಲು ಕ್ರಮವಹಿಸಲಾಗುವುದು.
ಉದ್ಯಮ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಉದ್ಯಮ ನಡೆಸುತ್ತಿದ್ದಲ್ಲಿ ತಕ್ಷಣವೇ ನಿಗದಿತ ದಾಖಲೆ ಸಹಿತ ಆನ್‌ಲೈನ್ ತಂತ್ರಾಂಶದ ಮೂಲಕ ಅಥವಾ ಪಟ್ಟಣ ಪಂಚಾಯತ್ ಕಚೇರಿಗೆ ಲಿಖಿತವಾಗಿ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೀಡಿ ಉದ್ಯಮ ಪರವಾನಿಗೆ ಪಡೆದುಕೊಳ್ಳಬೇಕು.
ಬೀದಿ ಬದಿ ವ್ಯಾಪಾರಸ್ಥರು, ಗೂಡಂಗಡಿದಾರರು ಹಾಗೂ ರಾಷ್ಟ್ರೀಯ ಹೆದ್ದಾರಿಬದಿಯ ವ್ಯಾಪಾರಸ್ಥರು ಉದ್ಯಮ ಪರವಾನಿಗೆ ಪಡೆಯದೇ ಉದ್ಯಮ ನಡೆಸುತ್ತಿದ್ದಲ್ಲಿ ಪಟ್ಟಣ ಪಂಚಾಯತ್ ಕಚೇರಿಗೆ ನಿಗದಿತ ಘನತ್ಯಾಜ್ಯ ಹಾಗೂ ಉದ್ಯಮ ಶುಲ್ಕವನ್ನು ಪಾವತಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟ ಗಾರರು ನಿಗದಿತ ಶುಲ್ಕ ಪಾವತಿಸಿ ಕಡ್ಡಾಯವಾಗಿ ಆನ್‌ಲೈನ್ ತಂತ್ರಾಂಶದ ಮೂಲಕ ತಂಬಾಕು ಪರವಾನಿಗೆ ಪಡೆಯುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.