ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

Update: 2025-04-17 22:13 IST
ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ
  • whatsapp icon

ಉಡುಪಿ, ಎ.17: ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲ್ಯಾಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.

ಆಸಕ್ತರು ಅರ್ಜಿ ಸಲ್ಲಿಸಲು ಎಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News