ಮಕ್ಕಳನ್ನು ದುಶ್ಚಟಗಳಿಂದ ದೂರವಿರಿಸಿದರೆ ಉತ್ತಮ ಸಮಾಜದ ನಿರ್ಮಾಣ: ಜಯಪ್ರಕಾಶ್ ಹೆಗ್ಡೆ

ಕುಂದಾಪುರ, ಎ.20: ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸವಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆ ಗಳು ಅದರ ಭಾಗವಾದರೆ ಮಾತ್ರ ಮಕ್ಕಳ ಒಳಗಿರುವ ಸುಪ್ತ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯ ಎಂದು ಮಾಜಿ ಸಚಿವ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಯಡಾಡಿ-ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ’ಮಂಥನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿ. ರಜಾದಿನಗಳನ್ನು ಸದುಪ ಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲ ರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆಯಾಗಿದೆ. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ ,ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಮೂಡಿ ಸುವ ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದರು.
ಚಲನಚಿತ್ರ ನಟಿ ಸಂಗೀತಾ ಶೃಂಗೇರಿ ಮಾತನಾಡಿ, ದ್ವೇಷವನ್ನು ಬಿಟ್ಟು ಮನುಷ್ಯತ್ವಕ್ಕೆ ಹೆಚ್ಚು ಬೆಲೆ ಕೊಟ್ಟು ಬದುಕುವ, ಮಾನವೀಯ ಮೌಲ್ಯಗಳಿಗೆ ಹೆಚ್ಚು ಮಾನ್ಯತೆ ದೊರೆಯುವ ಸಮಾಜ ನಮ್ಮದಾಗ ಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಮಾನವೀಯ ಮೌಲ್ಯಗಳನ್ನು ಕಲಿಸಲು ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಯಶಸ್ಸಿನ ಹಿಂದೆ ಅವರ ಅವಿರತ ಶ್ರಮ ಮತ್ತು ಪ್ರಯತ್ನ ಅಡಗಿರುತ್ತದೆ. ಸೋಲು ಮತ್ತು ಗೆಲುವುಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಯಶಸ್ಸು ಪಡೆಯಲು ಪ್ರಯತ್ನಿಸಿದರೆ ಸಾಧಕರಾಗಬಹುದು ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ವಹಿಸಿದ್ದರು. ಗುತ್ತಿಗೆದಾರ ಅರುಣ್ ಕುಮಾರ್ ಹೆಗ್ಡೆ, ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಮಾತನಾಡಿದರು. ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿದರು. ಕನ್ನಡ ಶಿಕ್ಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿ ದರು. ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ವಂದಿಸಿದರು.