ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಉಡುಪಿ, ಎ.21: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಮೇ 14ರಿಂದ 16ರವರೆಗೆ ಬೆಂಗಳೂರಿನ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನದಲ್ಲಿ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುವುದು.
ಸಮ್ಮೇಳನದಲ್ಲಿ ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ವಿಷಯವನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‌ಗಳಿಗೆ ನಗದು ಬಹುಮಾನ ನೀಡಲಾಗುವುದು.
ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪ ಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಮೇ 6ರ ಒಳಗಾಗಿ ಗೂಗಲ್ ಫಾರ್ಮ್ ಮೂಲಕ ಹೆಸರು ನೋಂದಾಯಿಸಿ ಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಅಕಾಡೆಮಿ ಅಧಿಕಾರಿಗಳ ಮೊ.ನಂ: 9845258894, 9743084194 ಹಾಗೂ 9686449019 ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.