ಇಂದ್ರಾಳಿ ಯಕ್ಷಗಾನ ಕೇಂದ್ರ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Update: 2025-04-26 20:16 IST

ಉಡುಪಿ, ಎ.26: ನಗರದ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಪಡೆಯಲು 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟನೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಆಸಕ್ತರು ದೂರವಾಣಿ ಸಂಖ್ಯೆ: 9900907702/ 9901190392/ 9945245144ನ್ನು ಸಂಪರ್ಕಿಸುವಂತೆ ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿಗಳು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.