ಸಮಗ್ರ ಕೃಷಿ ಪದ್ದತಿ ಅನುಸರಿಸಿ ಲಾಭ: ಎಂ.ಜಯರಾಮ ಶೆಟ್ಟಿ

ಕೋಟ, ಎ.27: ಕೃಷಿ ಪದ್ದತಿಯಲ್ಲಿ ಸಮಗ್ರ ಕೃಷಿ ನೀತಿಯನ್ನು ಅನುಸರಿಸಬೇಕು ಎಂದು ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದ್ದಾರೆ.
ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವ ದಲ್ಲಿ ಗೀತಾನಂದ ಪೌಂಡೇಶನ್, ಗೆಳೆಯರ ಬಳಗ ಕಾರ್ಕಡ ,ರೈತಧ್ವನಿ ಸಂಘ ಕೋಟ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ಶನಿವಾರ ನಡೆದ ರೈತರೆಡೆಗೆ ನಮ್ಮ ನಡಿಗೆ 45ನೇ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
ರೈತರು ಒಂದೇ ಬಗೆಯ ಬೆಳೆ ಬೆಳೆಯದೆ ಕಾಲಕ್ಕನುಗುಣವಾಗಿ ಮಣ್ಣಿಗೆ ಯೋಗ್ಯವಾದ ಬೆಳೆಗಳನ್ನು ಬೆಳೆಯಬೇಕು ಆಗ ಲಾದಾಯ ಬೆಳೆಯಾಗಿಸಲು ಸಾಧ್ಯವಿದೆ ಎಂದರಲ್ಲದೆ ಪ್ರಸುತ ರೈತ ಸಮುದಾಯಕ್ಕೆ ಅನುಕೂಲಕರ ಯೋಜನೆಗಳು ಶೂನ್ಯವಾಗಿದೆ. ಸರಕಾರ ಕೃಷಿಕರಿಗೆ ಹೆಚ್ಚಿನ ಉತೆತೀಜನ ನೀಡಿದರೆ ಕೃಷಿ ಪರಂಪರೆ ಉಳಿಯಲು ಸಾಧ್ಯವಿದೆ ಎಂದರು.
ಈ ವೇಳೆ ಕೃಷಿ ಮತುತಿ ಹೈನುಗಾರಿಕಾ ಕ್ಷೇತ್ರದ ಸಾಧಕಿ ಕೋಟತಟ್ಟು ಪಡುಕರೆಯ ಅನುಸೂಯ ಹಂದೆ ಇವರಿಗೆ ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಅಲ್ಲದೆ ಪರಿಸರ ಜಾಗೃತಿ ಸಲುವಾಗಿ ಗಿಡ ನೆಟ್ಟು, ಗೋ ಪೂಜೆ ನೆರವೆರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಕುಂದಾಪುರ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್ ಪ್ರಮೋದ್ ಹಂದೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ನಾಗರಾಜ್ ಹಂದೆ, ಕರ್ಣಾಟಕ ಬ್ಯಾಂಕ್ ನಿವೃತತಿ ಡಿಜಿಎಂ ರವೀಂದ್ರ ಹಂದೆ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು
ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸಾತಿವಿಕ ನುಡಿಗಳನ್ನಾಡಿ ದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು.ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು.ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.