ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ

Update: 2025-04-28 18:03 IST
ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ
  • whatsapp icon

ಉಡುಪಿ, ಎ.28: ಜನತೆಯ ಹೊರೆ ಇಳಿಸಿರಿ ಎಂಬ ಘೋಷಣೆಯೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಬೆಲೆ ಏರಿಕೆಯ ವಿರುದ್ಧ ಇಂದು ವಿಮೆನ್ ಇಂಡಿಯಾ ಮೂಮೆಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಮಣಿಪಾಲದಲ್ಲಿರುವ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ನಸೀಮಾ ಮಾತನಾಡಿ, ಕೇಂದ್ರ ಸರಕಾರ ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಏರಿಸಿದರೆ ರಾಜ್ಯ ಸರ್ಕಾರ ಹಾಲು, ನೀರು ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನಾ ಅಭಿಯಾನವನ್ನು ನಡೆಸುವ ಮೂಲಕ ಬೆಲೆಯೇರಿಕೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯ ನಸ್ರುಲ್ಲ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಉಡುಪಿ ಜಿಲ್ಲಾ ಉಪಾಧ್ಯಕ್ಷೆ ನಸೀಮಾ ಫಾತಿಮಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News